ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿರೆ ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.
ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಅಮೂಲ್ಯ ಕಾಮತ್ ಅವರು 600ಕ್ಕೆ 599 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದರೆ. ದಕ್ಷಿಣ ಕನ್ನಡದ ಜಿಲ್ಲೆಯ ಕೆನಾರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ದೀಪಶ್ರೀ ಅವರು 600 ಕ್ಕೆ 599 ಅಂಕ ಗಳಿಸಿ ಕಾಮರ್ಸ್ ವಿಭಾಗದಲ್ಲಿ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಬಾಯಿ ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.
ಪಿ.ಯು.ಪಿ ಫಲಿತಾಂಶ ಪ್ರಕಟ,ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ
