ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸುಳ್ಯದ ಶಾರದಾ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಾಗಿದೆ.
ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಿಂದ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಕಲಾ ವಿಭಾಗದಲ್ಲಿ 23 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
5 ಮಂದಿ ಡಿಸ್ಟಿಂಕ್ಷನ್ ಗಳಿಸಿದ್ದಾರೆ. ಹರ್ಷಿತಾ 587 ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ.
ಸುಶ್ಮಿತಾ 565 ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 3 ಮಂದಿ ಡಿಸ್ಟಿಂಕ್ಷನ್ ಗಳಿಸಿದ್ದು ವಿದ್ಯಾಕುಮಾರಿ ಬಿ.ಎಲ್. 531 ಅಂಕ ಗಳಿಸಿದ್ದಾರೆ.
ಸುಳ್ಯ ಶಾರದಾ ಕಾಲೇಜಿಗೆ ಶೇ.100 ಫಲಿತಾಂಶ
