ಅಕ್ಕ ತಂಗಿ ನಿಗೂಡವಾಗಿ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮಂಜುಳಾ (24) ಹಾಗೂ ಮಲ್ಲಿಕಾ (18) ನಾಪತ್ತೆಯಾದ ಸಹೋದರಿಯರು.
ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಮದುವೆಯಾಗಿದ್ದು, ಕಳೆದ 2 ವರ್ಷಗಳಿಂದ ತವರು ಮನೆಯಲ್ಲಿಯೇ ವಾಸವಾಗಿದ್ದರು.
ಮಲ್ಲಿಕಾ (18 ವರ್ಷ) 5 ಅಡಿ ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇವರೂ ಸಹ ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ ಹಾಗೂ ಹತ್ತನೇ ತರಗತಿ ವರೆಗೆ ಶಾಲೆಗೆ ಹೋಗಿದ್ದು, ಬಳಿಕ ಮನೆಯಲ್ಲಿಯೇ ಇದ್ದರು. ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಅಕ್ಕ ತಂಗಿ ನಿಗೂಡವಾಗಿ ನಾಪತ್ತೆ!
