ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಪುರುಷರ ಗುಡ್ಡೆ ಬಳಿ ಕೊಕ್ರಾಡಿ ನಾರಾವಿ ಸಾರ್ವಜನಿಕ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಏ.12 ರಂದು ಸುಮಾರು ರಾತ್ರಿ 12:15 ಕ್ಕೆ ಗಂಟೆಗೆ ಬೆಳ್ತಂಗಡಿ ತಾಲೂಕು ಕುತ್ತೂರು ಗ್ರಾಮದ ಪುರುಷ ಗುಡ್ಡೆ ಎಂಬಲ್ಲಿ ಕೊಕ್ರಾಡಿ ನಾರಾವಿ ಸಾರ್ವಜನಿಕ ಡಾಮರು ರಸ್ತೆಯಲ್ಲಿ ಕೆ ಎ 19 ಇಪಿ 9677 ನೇ ಮೋಟಾರು ಸೈಕಲ್ ನ್ನು ಅದರ ಸವಾರ ಪ್ರಶಾಂತ ರವರು ತಿರುವು ರಸ್ತೆಯಲ್ಲಿ ನಾರಾವಿ ಕಡೆಯಿಂದ ವೇಣೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷತನದಿಂದ ರಸ್ತೆಯೆಯ ತೀರಾ ಬಲ ಬದಿಗೆ ಸವಾರಿ ಮಾಡಿಕೊಂಡು ಬಂದು ರಸ್ತೆಯ ಬಲ ಬದಿಯಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರು ಸೈಕಲ್ ಸವಾರರಾದ ಪ್ರಶಾಂತ್ ಮತ್ತು ಸಹ ಸವಾರರಾದ ದಿನೇಶ ರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು
