ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಬೀಕರ ಭಯೋತ್ಪದಕರ ದಾಳಿಯನ್ನು ಸಂಪಾಜೆ ಪೇರಡ್ಕ–ಗೂನಡ್ಕ ಮುಹಿದ್ದೀನ್ ಜುಮಾ ಮಸೀದಿ ಅಧ್ಯಕ್ಷರು ಹಾಗೂ ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರು ಕಠು ಶಬ್ಧದಿಂದ ಖಂಡಿಸಿದ್ದಾರೆ. ಈ ಬೀಕರ ದಾಳಿಯಿಂದ ಅಮೂಲ್ಯ ಜೀವಗಳು ಬಲಿಯಾಗಿದೆ. ಭಯೋತ್ಪಾದಕ ದಾಳಿಯು ಅತ್ಯಂತ ಖಂಡನೀಯ ಮತ್ತು ಹ್ರದಯವಿದ್ರಾವಕ,ದಾಳಿಗೊಳಗಾದ ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತ ಪಡಿಸಿದ್ದಾರೆ,ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರಕಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕೆಂದು ಉಗ್ರಗಾಮಿ ಸಂಘಟನೆಗಳನ್ನು ಮಟ್ಟು ಹಾಕಲು ಕೇಂದ್ರ ಗುಪ್ತದಳವನ್ನು ಬಳಪಡಿಸಿ ಲು ಟಿ.ಎಂ ಶಹೀದ್ ತೆಕ್ಕಿಲ್ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ,ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡ ಕ್ರಮ ಶ್ಲಾಘನೀಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯನ್ನು ಪಾಲಿಸಿ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಅವರು ಸಚಿವರಾಗಿ ತಮ್ಮ ಕರ್ತವ್ಯವನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಅಭಿನಂದಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕರ ದಾಳಿ; ಕೆ.ಪಿ.ಸಿ.ಸಿ ಪ್ರ. ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ತೀವ್ರ ಖಂಡನೆ,ಸಂತಾಪ:
