ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಎಎಸ್‌ಪಿ (ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ) ನಾರಾಯಣ ಬರಮಗೆ ಅವರತ್ತ ಸಿಎಂ ಸಿದ್ದರಾಮಯ್ಯ ಕೈ ಎತ್ತಿ ತೋರಿಸಿ ಸಿಟ್ಟುಗೊಂಡ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿ, ‘ಪಾಕಿಸ್ಥಾನ ಜೊತೆ ಯುದ್ಧ ಬೇಡ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಘೋಷಣೆ ಕೂಗಿ ವೇದಿಕೆ ಹತ್ತಿರ ನುಗ್ಗಲು ಯತ್ನಿಸಿದರು. ಕಾರ್ಯಕ್ರಮದ ವೇಳೆ ಸಿದ್ದರಾಮಯ್ಯ ಗೋ ಬ್ಯಾಕ್ ಪಾಕಿಸ್ತಾನ್ ಎಂದು ಘೋಷಣೆ ಕೂಗುತ್ತ ಕಾರ್ಯಕ್ರಮದ ಕಡೆಗೆ ಕಾರ್ಯಕರ್ತೆಯರು ಬಂದಾಗ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕೂಡಲೇ ಪೊಲೀಸರು ಐವರು ಮಹಿಳೆಯರ ವಶಕ್ಕೆ ಪಡೆದರು.
ಕಾಂಗ್ರೆಸ್ ಸಮಾವೇಶಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆಗಮಿಸಿದ್ದರು. ಬೇರೆ ನಾಯಕರ ಭಾಷಣದವರೆಗೆ ಸುಮ್ಮನೇ ಕುಳಿತಿದ್ದ ಕಾರ್ಯಕರ್ತೆಯರು ಸಿಎಂ ಭಾಷಣ ಮಾಡುವಾಗ ಕಪ್ಪು ಪಟ್ಟಿ ತೋರಿಸಿ ಪ್ರತಿಭಟಿಸಿದರು. ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದು ನಿಲ್ಲಿಸಿ ಯಾವನವನು ಎಸ್‌ಪಿ ಎಂದು ಪ್ರಶ್ನಿಸಿ ವೇದಿಕೆಗೆ ಕರೆದಿದ್ದಾರೆ.ಈ ವೇಳೆ ವೇದಿಕೆಗೆ ಎಎಸ್‌ಪಿ ವೇದಿಕೆಗೆ ಬರುತ್ತಿದ್ದಂತೆ ಏನ್ರಿ ಇದು, ಏನು ಮಾಡ್ತಾ ಇದ್ದೀರಿ ಎಂದು ಪ್ರಶ್ನಿಸಿ ಕೈ ಎತ್ತಿ ಸಿಟ್ಟು ಹೊರಹಾಕಿದ್ದಾರೆ.
ನಂತರ ಸಚಿವ ಎಂ.ಬಿ ಪಾಟೀಲ್ ಸಿಎಂ ಸಿದ್ದರಾಮಯ್ಯರನ್ನು ಸಮಾಧಾನಪಡಿಸಿದರು.
ಪಾಕಿಸ್ತಾನದ ಪರ ಸಹಾನುಭೂತಿ ವ್ಯಕ್ತಪಡಿಸಿ ಮಾತನಾಡಿರುವ ಮುಖ್ಯಮಂತ್ರಿ ವಿರುದ್ಧ ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಯವರು ಸಮವಸ್ತ್ರದಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತವರಿಗೆ ಅನುಭವದ ಹಿರಿತನ, ನಡವಳಿಕೆ ಬೇಕು. ಸಿದ್ದರಾಮಯ್ಯನವರ ವಿಷಯದಲ್ಲಿ ಇದು ತಿರುವು ಮುರುವು ಆಗಿದೆ. ದಿನೇ ದಿನೇ ಅವರು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ಹತಾಶೆಯಿಂದ ಜನರು ಹಾಗೂ ಅಧಿಕಾರಿಗಳ ಮೇಲೆ ಅಹಂಕಾರ ಹಾಗೂ ತೋಳ್ಳಲ ಪ್ರದರ್ಶಿಸುತ್ತಿದ್ದಾರೆ. ಇದು ಅತ್ಯಂತ
ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುವ ಮೂಲಕ ರಾಷ್ಟ್ರ ಭಕ್ತಿ ಮೆರೆದ ದಿಟ್ಟ ಮಹಿಳೆಯರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ.
ಕರ್ತವ್ಯ ನಿರತ ಪೊಲೀಸ್ ವರಿಷ್ಠಾಧಿಕಾರಿಯ ಮೇಲೆ ದರ್ಪ ತೋರಿ ಅವರ ಮೇಲೆ ಹಲ್ಲೆಗೆ ಮುಂದಾದ ಸಿದ್ದರಾಮಯ್ಯನವರ ವರ್ತನೆ ಇಡೀ ಪೊಲೀಸ್ ಇಲಾಖೆಗೆ ಮಾಡಿದ ಅಪಮಾನವಾಗಿದೆ. ಈ ಹಿನ್ನೆಲೆಯಲ್ಲಿ ಅವಮಾನಕ್ಕೊಳಗಾದ ಪೊಲೀಸ್ ಅಧಿಕಾರಿ ಹಾಗೂ ಇಡೀ ಪೊಲೀಸ್ ಇಲಾಖೆಗೆ ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕೆಂದು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.
ಎಸ್.ಪಿಗೆ ಕಪಾವಳಮೋಕ್ಷಕ್ಕೆ ಕೈ ಎತ್ತಿದ ಮುಖ್ಯ ಮಂತ್ರಿ ಸಿದ್ಧ ರಾಮಯ್ಯ
