ಸುಳ್ಯದ ಎ.ಪಿ.ಎಂ.ಸಿ. ಸಮೀಪದ ಬಾಡಿಗೆ ಮನೆಯೊಂದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಮಡಪ್ಪಾಡಿ ಗ್ರಾಮದ ಕಜೆ ಪರಿಸರದ ವರದರಾಜ ಎಂಬ 45 ವರ್ಷ ಪ್ರಾಯದ ಈ ವ್ಯಕ್ತಿ ಈ ಕಟ್ಟಡದಲ್ಲಿ ಬಾಡಿಗೆ ರೂಮಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
ಬಾಡಿಗೆ ಮನೆಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮ ಹತ್ಯೆ
