ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ.) ಗೆ ವಹಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟರು ಕೇಂದ್ರ ಗೃಹಸಚಿವ ಅಮಿತ್ ಷಾ ರವರಿಗೆ ಮನವಿ ಮಾಡಿದ್ದಾರೆ.
ಇದು ಕೇವಲ ಒಂದು ಕೊಲೆಕೃತ್ಯವಲ್ಲ. ಇದರ ಹಿಂದೆ ದೇಶದಲ್ಲಿ ಅಸ್ಥಿರತೆ ಉಂಟುಮಾಡುವ ಸಂಚು ಇದೆ. ನಿಷೇಧಿತ ಪಿ.ಎಫ್.ಐ. ಸಂಘಟನೆಯವರು ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಆದ್ದರಿಂದ ಸರಿಯಾದ ತನಿಖೆ ಆಗಬೇಕಾಗಿದೆ. ಅದಕ್ಕಾಗಿ ತನಿಖೆಯನ್ನು ಎನ್.ಐ.ಎ.ಗೆ ವಹಿಸಬೇಕೆಂದು ನಾನು ಮನವಿ ಮಾಡಿದ್ದೇನೆ ಎಂದುವ ಎಂದು ಸಂಸದರು ತಿಳಿಸಿದ್ದಾರೆ.
ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ.) ವಹಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ
