ಅರಂತೋಡು : ಅರಂತೋಡು ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಶನಿವಾರ ವರದಿಯಾಗಿದೆ.
ಗಾಯಗೊಂಡ ಬೈಕ್ ಸವಾರನನ್ನು ಅರಂತೋಡು ದ್ವಿಚಕ್ರ ವಾಹನಗಳ ಗ್ಯಾರೇಜ್ ಮಾಲಕ ನಿತೀನ್ ಕಿರ್ಲಾಯ ಎಂದು ಗುರುತಿಸಲಾಗಿದೆ.
ಕಾರು ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು.ಬೈಕ್ ವಿರುದ್ಧ ದಿಕ್ಕಿನಿಂದ ಬರುತ್ತಿತ್ತು.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಕಾರಿನಲ್ಲಿದ್ದರು ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ.
ಅರಂತೋಡು : ಅಪಘಾತದಲ್ಲಿ ಗ್ಯಾರೇಜ್ ಮಾಲಕನಿಗೆ ಗಾಯ
