ಅಪ್ಪಟ ಭಾರತೀಯ ನಾರಿಯರ ಸಿಂಧೂರ ಅಳಿಸಿದ ಪಾಪಿಗಳಿಗೆ ಭಾರತೀಯ ಯೋಧರು ರಕ್ತ ಅಭಿಷೇಕವನ್ನೇ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಉಗ್ರರ ಮೇಲೆ ಭಾರತ ಕೊನೆಗೂ ಪ್ರತೀಕಾರ ತೀರಿಸಿಕೊಂಡಿದೆ. ಬುಧವಾರ ಬೆಳಿಗ್ಗೆ ಸಮಯ ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ದಾಳಿ ನಡೆಸಿದ್ದು, ಸುಮಾರು 90 ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.
ಭಾರತ ನಡೆಸಿದ ಈ ದಾಳಿಯಲ್ಲಿ ಲಷ್ಕರ್ ಉಗ್ರ ಹಫೀಜ್ ಸಯಿದ್‌ಗೆ ಸಂಬಂಧಿಸಿದ ಮರ್ಕಜ್ ಸುಭಾನಲ್ಲಾಹ್ ಮಸೀದಿ ಧ್ವಂಸವಾಗಿದೆ. ಸುಮಾರು 18 ಏಕ್ರೆ ವಿಸ್ತೀರ್ಣ ಪ್ರದೇಶದಲ್ಲಿ ನಿರ್ಮಾಣವಾಗಿದ್ದ ಈ ಮಸೀದಿ ಆವರಣದಲ್ಲಿ ಅಗ್ರ ಚಟುವಟಿಕೆಗಳು ನಡೆಯುತ್ತಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ
ಮಂಗಳವಾರ ಮೇ 6 ಗಡಿಯಲ್ಲಿ ಸಮಾರಾಭ್ಯಾಸ ನಡೆಸುತ್ತಿದ್ದ ಭಾರತೀಯ ಸೇನೆ ತಡರಾತ್ರಿ 1:44ರ ವೇಳೆ ರಫೇಲ್, ಮಿರಾಜ್-2000 ಮತ್ತು ಸುಖೋಯ್-30 ಸೇರಿದಂತೆ ಇತರ ಯುದ್ಧ ವಿಮಾನಗಳನ್ನ ಬಳಸಿ ಪಾಕ್ ಉಗ್ರತಾಣಗಳ ಮೇಲೆ ದಾಳಿ ಮಾಡಿದೆ.
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರ: ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ದಾಳಿ, ಸುಮಾರು 90 ಅಧಿಕ ಉಗ್ರಾರ ಸಾವು
