ಪಹಲ್ಲಾಮ್ ಭಯೋತ್ಪಾದಕ ದಾಳಿಗೆ
ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಕೂಡಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಭಾರತದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಲಾಹೋರ್ ನಿಂದ 400 ಕಿಲೋ ಮೀಟರ್ ದೂರದಲ್ಲಿರುವ ಬಹಾವಲ್ಪುರದಲ್ಲಿರುವ ಜೈಶ್ ಎ ಮೊಹಮ್ಮದ್ ನ ಪ್ರಧಾನ ಕಚೇರಿಯನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.
ಸುಮಾರು 18ಕ್ಕೂ ಅಧಿಕ ಎಕರೆ ಜಾಗದಲ್ಲಿರುವ ಜೈಶ್ ಇ ಮೊಹಮ್ಮದ್ ಪ್ರಧಾನ ಕಚೇರಿ ಉಗ್ರರ ನೇಮಕಾತಿ, ದೇಣಿಗೆ ಸಂಗ್ರಹ, ಉಗ್ರ ಚಟುವಟಿಕೆಯ ಕೇಂದ್ರ ಸ್ಥಾನವಾಗಿದ್ದು, ಇದನ್ನು ಗುರಿಯಾಗಿರಿಸಿಕೊಂಡು ಭಾರತ ದಾಳಿ ನಡೆಸಿತ್ತು. ಜೆಇಎಂನ ಮೌಲಾನಾ ಮಸೂದ್ ಅಜರ್ ಬಹಾವಲ್ಪುರ್ ನಲ್ಲಿ ಜನಿಸಿದ್ದು, ಅಜರ್ ಭಾರೀ ಭದ್ರತೆಯಲ್ಲಿ ಈ ಪ್ರಧಾನ ಕಚೇರಿಯಲ್ಲೇ ವಾಸವಾಗಿದ್ದ ಎಂದು ವರದಿ ತಿಳಿಸಿದೆ.
ದಾಳಿಯಲ್ಲಿ ಲಷ್ಕರ್ ಮತ್ತು ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಹಲವು ಕಮಾಂಡ್ ಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯಲ್ಲಿ ಉಗ್ರ ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಸಾವು?
