ದಕ್ಷಿಣ ಭಾರತದ ಪ್ರಸಿದ್ದ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ ಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು ಇಂದು ಮೇ.12ರಂದು ಸೋಮವಾರ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರು ಅಧಿಕಾರ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸದಸ್ಯರು ಸಭೆ ನಡೆಸಿ ಅಧ್ಯಕ್ಷರ ಅಧಿಕೃತ ಆಯ್ಕೆ ನಡೆಸಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ತಿಳಿದು ಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ

















