ತೀರಾ ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಪೆ ಹೊಂದಿ ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದಿದ್ದು, ಮಗನ ಸ್ಥಿತಿ ಗಂಭೀರವಾಗಿದೆ.
ಮೃತರು ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪುತ್ನಿ ಕಲ್ಯಾಣಿ(96) ಎಂಬವರಾಗಿದ್ದಾರೆ. ಅವರ ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಅವರು ಗಂಭೀರಾವಸ್ಥೆಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಹಾಕ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಲ್ಯಾಣಿ ಮತ್ತು ಜಯರಾಂ ಕೆ ಅವರು ಕೂಳೂರು ಮನೆಯಲ್ಲಿ ಮೇ. 10 ರಂದು ಬೆಳಗ್ಗೆ ಜಯರಾಂ ಅವರ ಮನೆಯ ಬಳಿಯಿಂದ ಯಾವುದೇ ಶಬ್ದ ಕೇಳದೆ ಇದ್ದುದರಿಂದ ನೆರೆ ಹೊರೆ ಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಜೊತೆಯಾಗಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಊರವರ ಸಹಕಾರದೊಂದಿಗೆ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿದ್ದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಮೂರು ದಿನಗಳವರೆಗೂ ತೀವ್ರ ನಿಗಾ ಘಟಕದಲ್ಲಿದ್ದ ಅವರ ಪೈಕಿ ತಾಯಿ ಕಲ್ಯಾಣಿ ಅವರು ಮೇ.12 ರಂದು ಕೊನೆಯುಸಿರೆಳೆದಿದ್ದಾರೆ.
ಹಣದ ಸಮಸ್ಯೆ ನಿದ್ರೆ ಮಾತ್ರೆ ಸೇವಿಸಿದ ತಾಯಿ ಮಗ,ತಾಯಿ ಸಾವು ಮಗ ಗಂಭೀರ
