ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ

ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ.21 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನೀರು ನುಗ್ಗುವ ತಗ್ಗು ಪ್ರದೇಶಗಳು, ಕೆರೆ-ನದಿ-ಸಮುದ್ರ ತೀರಗಳಿಗೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಮುಲೈ ಮುಗಿಲನ್ ರವರು ಆದೇಶದಲ್ಲಿ ಸೂಚಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅದೇ ರೀತಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ಇನ್ಸಿಡೆಂಟ್ ಕಮಾಂಡರ್ ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕಾ ದೋಣಿಗಳು ಕೂಡಲೇ ಮರಳಿ ದಡ ಸೇರಬೇಕು ಎಂದು ಸೂಚನೆ ನೀಡಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ತೆರಳಬಾರದು. ಸಂಬಂಧಪಟ್ಟ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರ ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Leave a Comment

Your email address will not be published. Required fields are marked *

error: Content is protected !!
Scroll to Top