ದ.ಕ ಜಿಲ್ಲೆಯಲ್ಲಿ ಭಾರೀ ಸುರಿಯುತ್ತಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 27.05.2025 ಮತ್ತು ದಿನಾಂಕ: 28.05.2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ
ಭಾರೀ ಮಳೆ ಹಿನ್ನಲೆ,ದ.ಕ ಜಿಲ್ಲಾ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ
