ಒಂಟಿಯಾಗಿದ್ದ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆಯಲ್ಲಿ ನಡೆದಿದೆ.
ಲತಾ(40) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮಹಿಳೆಯ ಪತಿ ಹೋಲ್ ಸೇಲ್ ಬಟ್ಟೆ ವ್ಯಾಪಾರಿಯಾಗಿದ್ದು. ಲತಾ ಅವರ ಮಗಳು ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಲತಾ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭದಲ್ಲಿ ನುಗ್ಗಿದ ದರೋಡೆಕೋರರು ಲತಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಹಂತಕರು ಪರಾರಿಯಾಗಿದ್ದಾರೆ.
ಮಹಿಳೆಯ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳು!














































