ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.
ಈ ಇಬ್ಬರು ಶಾಸಕರನ್ನೂ ಬಿಜೆಪಿಯು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದು, ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ಈ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಈ ನೋಟಿಸ್ ಗೆ ಸರಿಯಾದ ಉತ್ತರ ನೀಡದ ಹಿನ್ನೆಲೆ ಉಚ್ಛಾಟನೆ ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಬಿಜೆಪಿ

















