May 2025

ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಣೆ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲಾಧ್ಯಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಗುರುವಾರ ಮತ್ತು‌ ಶುಕ್ರವಾರ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. , ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಣೆ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನ ಶವ ಬಾವಿಯಲ್ಲಿ ಪತ್ತೆ!

ಮೂಡುಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಹಾಗೂ ಆಕೆಯ ಪ್ರಿಯಕರ ಎನ್ನಲಾದ ವ್ಯಕ್ತಿಯ ಮೃತದೇಹಗಳು ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿವೆ. ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.ಮೃತರನ್ನು ಬಡಗಮಿಜಾರು ನಿವಾಸಿ ನಮೀಕ್ಷಾ ಶೆಟ್ಟಿ (29) ಹಾಗೂ ಆಕೆಯ ಪ್ರಿಯಕರನೆಂದು ಹೇಳಲಾಗುತ್ತಿರುವ ನಿಡೋಡಿಯ ಪ್ರಶಾಂತ್ ಎಂದು ಹೇಳಲಾಗುತ್ತಿದರದೆ. ನಮೀಕ್ಷಾ ಅವರಿಗೆ ಈ ಹಿಂದೆಯೇ ವಿವಾಹವಾಗಿದ್ದು, ಇಬ್ಬರು ಚ ಮಕ್ಕಳಿದ್ದಾರೆ. ಅವರ ಪತಿ ಸತೀಶ್‌ ಪೂನಾದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನ ಶವ ಬಾವಿಯಲ್ಲಿ ಪತ್ತೆ! Read More »

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಮರುದಿವಸ ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ದುಷ್ಕರ್ಮಿಗಳಿಂದ ಹತ್ಯೆಯಾದ ಅಬ್ದುಲ್ ರಹಿಮಾನ್ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗಿ

ಬಂಟ್ವಾಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಅಬ್ದುಲ್ ರಹಿಮಾನ್ ಅವರ ಅಂತ್ಯಕ್ರಿಯೆ ಅವರ ಊರಾದ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಬುಧವಾರ ನೆರವೇರಿತು.ದೇರಳಕಟ್ಟೆ ಖಾಸಗಿ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಮೃತದೇಹವನ್ನು ಅವರ ಮನೆಗೆ ಕೊಂಡೊಯ್ಯಲಾಯಿತು. ಈ ವೇಳೆ ರಹೀಂ ಅವರ ತಂದೆ, ತಾಯಿ, ಸಹೋದರಿ, ಪತ್ನಿ ಹಾಗೂ ಬಂಧುಗಳು ಅಂತಿಮ ದರ್ಶನ ಪಡೆದರು. ಅವರ ಪಾರ್ಥೀವ ಶರೀರವನ್ನು ಮನೆಗೆ ತರುತ್ತಿದ್ದಂತೆಯೇ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಬಳಿಕ ಸ್ಥಳೀಯ ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿ ಅಂತಿಮ ವಿಧಿಗಳನ್ನು ನೆರವೇರಿಸಿದರು.ಬಳಿಕ ಸ್ಥಳೀಯ

ದುಷ್ಕರ್ಮಿಗಳಿಂದ ಹತ್ಯೆಯಾದ ಅಬ್ದುಲ್ ರಹಿಮಾನ್ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗಿ Read More »

ಮಳೆಯ ಪ್ರಮಾಣ ಹೆಚ್ಚಾಗಲಿರುವುದರಿಂದ ಹಲವು ಜಿಲ್ಲೆಗಳಿಗೆ ಮತ್ತೆ ರೆಡ್ ಅಲರ್ಟ್ ಘೊಷಣೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಹೆಚ್ಚಾಗಿದ್ದು ಮೇ 30ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮೇ 28 ರಿಂದ 30ರ ವರೆಗೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಳೆಯ ಪ್ರಮಾಣ ಹೆಚ್ಚಾಗಲಿರುವುದರಿಂದ ಹಲವು ಜಿಲ್ಲೆಗಳಿಗೆ ಮತ್ತೆ ರೆಡ್ ಅಲರ್ಟ್ ಘೊಷಣೆ! Read More »

ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟಕ್ಕೆ ಯತ್ನ, ಮರದ ದಿಮ್ಮಿಗಳು ಮತ್ತು ಓರ್ವ ವಶಕ್ಕೆ

ಅರಂತೋಡು ಗ್ರಾಮದ ಅಡ್ಕಬಳೆ – ಬನ ಎಂಬಲ್ಲಿ ಎರಡು ಹೆಬ್ಬಲಸು ಮರಗಳನ್ನು ಕಡಿದು ಸಾಗಾಟಕ್ಕೆ ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾಳಿ ನಡೆಸಿ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ತುಷಾರ ಎಂಬವರ ಜಾಗ ದಲ್ಲಿದ್ದ ಹೆಬ್ಬಲಸು ಮರವನ್ನು ಅರಂತೋಡಿನ ಮುನೀರ್ ಎಂಬವರು ಕಡಿದು ಸಾಗಾಟಕ್ಕೆ ಯತ್ನ ನಡೆಸಿದರೆನ್ನಲಾಗಿದೆ.ತುಷಾ‌ರ್ ಮತ್ತು ಮುನೀರ್ ಮೇಲೆ ಕೇಸು ದಾಖಲಾಗಿದೆ. ತುಷಾರ್ ರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಮುನೀರ್ ತಲೆಮರೆಸಿಕೊಂಡಿದ್ದಾರೆ

ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟಕ್ಕೆ ಯತ್ನ, ಮರದ ದಿಮ್ಮಿಗಳು ಮತ್ತು ಓರ್ವ ವಶಕ್ಕೆ Read More »

ಇನ್ನೂ ಮುಂದೆ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಬೆಳಗ್ಗಿನ ಉಪಹಾರ ಆರಂಭ

ಪ್ರಸಿದ್ದ ಪುಣ್ಯಕ್ಷೇತ್ರ ವಾಗಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಗ್ಗಿನ ಉಪಹಾರ ನೀಡಲು ವ್ಯವಸ್ಥಾಪನಾ ಸಮಿತಿ ಚಿಂತನೆ ನಡೆಸಿದ್ದು ಮೇ.30ರಂದು ಇದರ ಪ್ರಾರಂಭೋತ್ಸವ ನಡೆಯಲಿದೆ.ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನದಾಸೋಹ ಭೋಜನಪ್ರಸಾದ ವ್ಯವಸ್ಥೆ ಜಾರಿಯಲ್ಲಿದೆ. ಇದೀಗ ಬೆಳಗ್ಗಿನ ಉಪಹಾರವನ್ನು ನೀಡಲು ಯೋಜನೆ ರೂಪಿಸಲಾಗಿದ್ದು ಮೇ.30ರಂದು ಬೆಳಗ್ಗೆ8 ರಿಂದ ಉಪಹಾರ ಸೇವೆ ಆರಂಭ ಆಗಲಿದೆ.

ಇನ್ನೂ ಮುಂದೆ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಬೆಳಗ್ಗಿನ ಉಪಹಾರ ಆರಂಭ Read More »

ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, 15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ದುಷ್ಕರ್ಮಿಗಳ ತಂಡವೊಂದು ಮಂಗಳವಾರ ತಲವಾರು ದಾಳಿ ನಡೆಸಿ ತಲವಾರು ದಾಳಿಗೊಳಗಾದ ವ್ಯಕ್ತಿಗಳಲ್ಲಿ ಒಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಘಟನೆ ಅಡ್ಡರು ಕೊಲ್ಕಮಜಲು ಎಂಬಲ್ಲಿ ನಡೆದಿದ್ದು ಈ ಘಟನೆಗೆ ಸಂಬಂಧಿಸಿ 15 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಅಬ್ದುಲ್ ರಹಿಮಾನ್ ಮೃತಪಟ್ಟ ಯುವಕನಾಗಿದ್ದು, ಕಲಂದರ್ ಶಾಫಿ ಎಂಬ ಯುವಕ ಗಾಯಗೊಂಡಿದ್ದಾನೆ. ಅಬ್ದುಲ್ ರಹಿಮಾನ್ ಅವರು ಇಮ್ಮಿಯಾಝ್ ಅವರೊಂದಿಗೆ ತನ್ನ ಪಿಕ್ ಅಪ್ ವಾಹನದಲ್ಲಿ ಅದ್ದೂರಿನಿಂದ ಕಲ್ಪನೆ

ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, 15 ಮಂದಿ ವಿರುದ್ಧ ಪ್ರಕರಣ ದಾಖಲು Read More »

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರನ್ನು‌ ಬಂಧಿಸಿದ ಪೊಲೀಸರು

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್‌ ಅವರನ್ನು ಕದ್ರಿ ಠಾಣೆ ಪೊಲೀಸರು ಮೇ 27 ಬಂಧಿಸಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ.

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರನ್ನು‌ ಬಂಧಿಸಿದ ಪೊಲೀಸರು Read More »

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಶಾಸಕರನ್ನು‌ ಉಚ್ಚಾಟಿಸಿದ ಬಿಜೆಪಿ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌.ಟಿ.ಸೋಮಶೇಖರ್‌ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.ಈ ಇಬ್ಬರು ಶಾಸಕರನ್ನೂ ಬಿಜೆಪಿಯು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದು, ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ಈ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಈ ನೋಟಿಸ್ ಗೆ ಸರಿಯಾದ ಉತ್ತರ ನೀಡದ ಹಿನ್ನೆಲೆ ಉಚ್ಛಾಟನೆ ಮಾಡಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಶಾಸಕರನ್ನು‌ ಉಚ್ಚಾಟಿಸಿದ ಬಿಜೆಪಿ Read More »

error: Content is protected !!
Scroll to Top