ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷನ ಮನೆ ಮೇಲೆ ದುಷ್ಕರ್ಮಿಗಳು ಭಾನುವಾರ ರಾತ್ರಿ ಕಲ್ಲು ತೂರಾಟ ನಡೆಸಿರುವ ಘಟನೆ ವರದಿಯಾಗಿದೆ.
ದುಷ್ಕರ್ಮಿಗಳು ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿರುವ ಭರತ್ ಕೆಂಪರಾಜು ಎನ್ನುವವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಅವರ ಕಾರಿನ ಮೇಲೆ ಕಲ್ಲು ಹಾಕಿ ಜಖಂಗೊಳಿಸಿದ್ದಾರೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗುತ್ತಿವೆ.
ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ
