ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪಿಕಪ್ ಪಲ್ಟಿ ಹೊಡೆದು ಚಾಲಕನಿಗೆ ಗಂಭೀರ ಗಾಯ
