ಆಟೋ ರಿಕ್ಷಾವನ್ನು ನುಜ್ಜುಗುಜ್ಜು ಮಾಡಿದ ಕಾಡಾನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋ ರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6 ರಂದು ಮುಂಜಾನೆ ನಡೆದಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತನ್ನ ಆಟೋರಿಕ್ಷಾದಲ್ಲಿ ಜೂ.6 ರಂದು ಮುಂಜಾನೆ 5:30 ಸಮಯಕ್ಕೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆಯ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ದೊಡ್ಡ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದ್ದು ಇದನ್ನು ಕಂಡ ದಿನೇಶ್ ಗಾಬರಿಗೊಂಡು ಸ್ಥಳದಲ್ಲಿಯೇ ಮೂರ್ಛ ಹೋಗಿದ್ದರು. ರಿಕ್ಷಾವನ್ನು ಆನೆ ಹುಡಿ ಮಾಡುತ್ತಿರುವ ಶಬ್ದ ದಿನೇಶ್ ರವರ ಪತ್ನಿ ಹಾಗೂ ನೆರೆ ಮನೆಯವರಿಗೆ ಕೇಳಿ ಸ್ಥಳಕ್ಕೆ ಬಂದು ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು ಆಗಮಿಸಿ ಪರಿಶೀಲನೆ ಮಾಡುತ್ತಿದ್ದಾರೆ.



































































































Leave a Comment

Your email address will not be published. Required fields are marked *

error: Content is protected !!
Scroll to Top