ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ-ಸ್ವಾಗತ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎಂ. ದೀಪಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು. ಅತಿಥಿಗಳಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಜಯರಾಮ ರೈ , ನಿರ್ದೇಶಕ ಮೋನಪ್ಪ ಎಂ, ಸುಂದರ ಕಾಡು ಸೊರಂಜ ಭಾಗವಹಿಸಿದರು. ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ ಸ್ವಾಗತಿಸಿ, ಶಿಕ್ಷಕಿ ಮೀನ ಕುಮಾರಿ ವಂದಿಸಿದರು. ಶಿಕ್ಷಕ ಶಿವಪ್ರಕಾಶ್ ಕೆ ನಿರೂಪಿದರು. ದೈಹಿಕ ಶಿಕ್ಷಣ ಶಿಕ್ಷಕ ಶಿವ ಪ್ರಸಾದ ಕೆ, ಶಿಕ್ಷಕರಾದ ಕುಮಾರ ಲಮಾಣಿ, ಸವಿತ ಕುಮಾರಿ, ಸಿಬ್ಬಂದಿ ಬೇಬಿ ಕಾರ್ಯಕ್ರಮಕ್ಕೆ ಸಹಕರಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ನೀಡುವ ಪಠ್ಯಪುಸ್ತಕ ಹಾಗೂ ಶಾಲಾ ವತಿಯಿಂದ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top