ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ 18ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.
ಕಾರ್ಕಳ ತಾಲೂಕಿನ ಪಡುಮನೆಯ
ಶಂಕರನಾರಾಯಣ ಭಟ್ (41) ಮೃತಪಟ್ಟ ವ್ಯಕ್ತಿ.
ಕಾರ್ಕಳದಿಂದ ಧರ್ಮಸ್ಥಳ ಮಾರ್ಗವಾಗಿ ಸುಮಾರು 30 ಪ್ರಯಾಣಿಕರಿದ್ದ ಬಸ್ಸು ಬೆಂಗಳೂರಿನತ್ತ ಹೋಗುತ್ತಿದ್ದ ಖಾಸಗಿ ಬಸ್, ಲಾವತಡ್ಕ ಬಳಿ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ನೆಲ್ಯಾಡಿ ಸಮೀಪ ಭೀಕರ ಬಸ್ ಲಾರಿ ಅಪಘಾತ,ಓರ್ವ ಸಾವು,ಹಲವರಿಗೆ ಗಾಯ

















