ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು,ಜೂ.17ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಈಗಿರುವ ಹವಾಮಾನದ ವೈಶಿಷ್ಟ್ಯಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 16 ರಿಂದ 20ರ ವರೆಗೆ ವ್ಯಾಪಕವಾಗಿ ಮಳೆಯಾದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಜೂನ್ 17ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ,ಮತ್ತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
