ವೈದಕೀಯ ವಿದ್ಯಾರ್ಥಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಖಾಸಗಿ ಆಸ್ಪತ್ರೆಯ ಯುವ ವೈದ್ಯ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ವೈದ್ಯನನ್ನು ಕೇರಳದ ಆಲಪ್ಪುಝ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ. ಇವರು ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಫಿಸಿಯೋಥೆರಪಿ ವಿಭಾಗದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಭಾನುವಾರ ರಾತ್ರಿ ಸುಮಾರು 11:45ರ ವೇಳೆಗೆ ಡಾ. ಅಮಲ್ ಅವರು ತಮ್ಮ ಸಿಯಾಝ್ ಕಾರಿನಲ್ಲಿ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯೊಂದಿಗೆ ನಂತೂರಿನಿಂದ ಪಂಪೈಲ್ ಕಡೆಗೆ ತೆರಳುತ್ತಿದ್ದರು. ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಕಾರು ಅತಿವೇಗದಿಂದ ಡಿವೈಡರ್ನ ಗ್ರಿಲ್‌ಗೆ ಡಿಕ್ಕಿ ಹೊಡೆದು 2-3 ಬಾರಿ ಪಲ್ಟಿಯಾಗಿ ರಸ್ತೆಯ ಮೇಲೆ ಬಿದ್ದಿದೆ. ಚಾಲಕ ಡಾ. ಮೊಹಮ್ಮದ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ವಿದ್ಯಾರ್ಥಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯ ವಿದ್ಯಾರ್ಥಿನಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರು ಅಪಘಾತವಾಗಿ ಯುವ ವೈದ್ಯ ಸಾವು!
