ಉಳಾಯಿ ಪಿದಾಯಿ ಜೂಜಾಟ ಅಡ್ಡೆಗೆ ಪೊಲೀಸ್ ದಾಳಿ

ಅಕ್ರಮವಾಗಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಓಡಿನ್ನಾಳ ಗ್ರಾಮದ ಪಣಿಜಾಲು ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಉಲಾಯಿ- ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರಗೆ ಜೂ.17 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ಇನ್ಸೆಕ್ಟ‌ರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ಮಾಡಿದ್ದಾರೆ.
ದಾಳಿ ವೇಳೆ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಿದ್ದು. ಸ್ಥಳದಲ್ಲಿ ಜೂಜಾಟಕ್ಕೆ ಬಳಸಿದ ಎಲೆಗಳನ್ನು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ, 26,778 ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 2 0 112(1) BNS 23 5 ದಾಖಲಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸೆಕ್ಟರ್ ಸುಬ್ಬಾಪುರ್ ಮಠ, ಸಬ್ ಇನ್ಸೆಕ್ಟರ್ ಮುರುಳಿಧರ್ ನಾಯ್, ಸಬ್ ಇನ್ಸೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top