ಸುಬ್ರಹ್ಮಣ್ಯ ಕೆ.ಎಸ್.ಆರ್.ಸಿ ಬಸ್ ನಿಲ್ದಾಣದಲ್ಲಿ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತ ಪಟ್ಟ ಘಟನೆ ವರದಿಯಾಗಿದೆ.
ಐನೆಕಿದು ಗ್ರಾಮದ ಕುಜುಂಬಾರು ನಿವಾಸಿ ಡೀಕಯ್ಯ ಉಪ್ಪಳಿಕೆ ಎಂಬವರು
ಹೃದಯಾಘಾತವಾಗಿ ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ.
ಅವರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತಾದರೂ ಅದಾಗಲೇ ಅವರು ಮೃತ ಪಟ್ಟಿದ್ದರೆನ್ನಲಾಗಿದೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವೇದಾವತಿ, ತಾಯಿ ಶಿವಮ್ಮ, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.
ಬಸ್ಸು ನಿಲ್ದಾಣದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

















