ಆಲೆಟ್ಟಿ ಶಾಲೆಗೆ ಚೈತನ್ಯ ಸೇವಾಶ್ರಮದಿಂದ ಉಚಿತ ಪುಸ್ತಕ ವಿತರಣೆ

23/06/2025 ಸೋಮವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೆಟ್ಟಿ ಇಲ್ಲಿ ಪ್ರಥಮ ಪೋಷಕರ ಸಭೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಶ್ರೀ ಶ್ರೀ ಸ್ವಾಮಿ ಯೋಗೇಶ್ವರನಂದ ಸರಸ್ವತಿ, ಚೈತನ್ಯ ಸೇವಾ ಶ್ರಮ ಅಜ್ಜಾವರ ಇವರ 223 ನೇ ಕೃತಿ ಮನಸಿನಂತೆ ಮಾನವನು ಕೃತಿಯನ್ನು ಸರಕಾರಿ ಪ್ರೌಢಶಾಲೆ ಆಲೆಟ್ಟಿ ಇಲ್ಲಿಯ ಮುಖ್ಯ ಗುರುಗಳಾದ ಶ್ರೀಮತಿ ವಿಜಯಲಕ್ಷ್ಮಿ ಇವರು ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಪ್ರಕಾಶ ಮುಡಿತ್ತಾಯ ಉಪ ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರು ಪೋಷಕರಿಗೆ ಅತಿಯಾದ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಮಾನವೀಯ ಸಂಬಂಧಗಳ ಪ್ರಾಮುಖ್ಯತೆಯ ಕುರಿತು ತಿಳಿಸಿದರು. ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಮತ್ತು ಚೈತನ್ಯ ಸೇವಾಶ್ರಮ ಅಜ್ಜಾವರ ಇವರಿಂದ ಕೊಡ ಮಾಡಿದ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top