ಅರಂತೋಡು: ಆನೆಗಳು ಸೇರಿದಂದೆ ಇತರ ಕಾಡು ಪ್ರಾಣಿಗಳ ಹಾವಳಿಯಿಂದ ಹಾನಿಗೊಳಗಾಗಿರುವ ಆರಂತೋಡು-ತೋಡಿಕಾನ ಗ್ರಾಮದ ಕೃಷಿಕರು ಹಾಗೂ ಶಾಸಕರು ಮತ್ತು ಅರಣ್ಯಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಅರಂತೋಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾಡು ಪ್ರಾಣಿಗಳ ಹಾವಳಿಯಿಂದ ಆಗಿರುವ ಹಾನಿಯ ಕುರಿತು ಕೃಷಿಕರು ಶಾಸಕರಿಗೆ
ವಿವರಿಸಿದರು. ರೈತರ ಸಮಸ್ಯೆಯನ್ನು ಆಲಿಸಿದ ಶಾಸಕಿ ಭಾಗೀರಥಿ ಮುರುಳ್ಯ ಕಾಡು ಪ್ರಾಣಿಗಳ ಪ್ರಾಣಿಗಳ ಹಾವಳಿ ತೀವ್ರಗೊಂಡಿದ್ದು ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಭಾಗಗಳಲ್ಲಿ ವ್ಯಾಪಕ ಹಾನಿ ಮಾಡಿವೆ.ಇದಕ್ಕೆ ಶಾಶ್ವತ ತಡೆ ಮಾಡಲು ಸರಕಾರ ಹಾಗೂ ಅರಣ್ಯ ಸಚಿವರ ಗಮನಕ್ಕೆ ತರಲಾಗಿದೆ. ಅರಣ್ಯದಂಚಿನಲ್ಲಿ ಸೋಲಾರ್ ಬೇಲಿ ನಿರ್ಮಾಣ ಸೇರಿದಂತೆ ವಿವಿಧ ತಡೆಗಳನ್ನು ಹೆಚ್ಚಾಗಿ ಅನುಷ್ಠಾನ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ಮಾತನಾಡಿ ಸುಳ್ಯ ಕ್ಷೇತ್ರ ಅರಣ್ಯದಿಂದ ಸುತ್ತುವರಿದ ಕಾರಣ ಆನೆ ಹಾಗೂ ಇತರ ವನ್ಯ ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಅಲ್ಲದೆ ವನ್ಯಜೀವಿಗಳ ಹಾವಳಿಯಿಂದ ಕೃಷಿ ನಾಶ ಉಂಟಾದ ಕೃಷಿಕರಿಗೆ ಸರಕಾರದ ನಿಯಮದ ಪ್ರಕಾರ ಗರಿಷ್ಠ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ, ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷ ಡಾ.ಲಕ್ಷಿಶ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂರಾರು ರೈತರು ಭಾಗವಹಿಸಿದರು.
ಕಾಡಾನೆಗಳ ಸಮಸ್ಯೆಯ ಬಗ್ಗೆ ಶಾಶ್ವತ ತಡೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಶಾಸಕಿ ಭಾಗೀರಥಿ

















