ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಳ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳ ಕಾಲ ಧಾರಕಾರವಾಗಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಗದಗ, ರಾಯಚೂರು ಹಾಗೂ ಯಾದಗಿರಿಯಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಚಳಿಯ ವಾತಾವರಣದ ಅನುಭವವಾಗಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top