ಪಾಕಿಸ್ತಾನ ಇದೀಗ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಎಲ್ ಒಸಿಯಲ್ಲಿ ಗುಂಡಿನ ದಾಳಿ ನಡೆಸಿದೆ.
ಕದನ ವಿರಾಮ ಉಲ್ಲಂಘಿಸಿರುವ ಪಾಕ್ ಸೇನೆ ಪೂಂಚ್ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯೂ ಬಲವಾಗಿ ಪ್ರತಿದಾಳಿ ನಡೆಸಿದೆ.
ಎರಡೂ ಸೇನೆಗಳ ನಡುವೆ ಗುಂಡಿನ ಚಕಮಕಿ 15 ನಿಮಿಷಗಳ ಕಾಲ ಮುಂದುವರೆಯಿತು. ಇಲ್ಲಿಯವರೆಗೆ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಜಮ್ಮು ಕಾಶ್ಮೀರದಲ್ಲಿ ಪಾಕ್ ಸೈನ್ಯದಿಂದ ಮತ್ತೆ ಗುಂಡಿನ ದಾಳಿ














































