ಪಡಿತರ ಚೀಟಿಯಲ್ಲಿ ಹೆಸರು ಮತ್ತಿತರ ಸೇರ್ಪಡೆ ಇಲ್ಲವೆ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಮತ್ತೊಮ್ಮೆ ಅನುಮತಿ ನೀಡಿದೆ.
ಆಗಸ್ಟ್ ಒಂದರಿಂದಲೇ ಈ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದ್ದು ಈ ತಿಂಗಳ ಅವಕಾಶ ವಿಸ್ತರಿಸಿದೆ. ಪಡಿತರ ಚೀಟಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ಒದಗಿಸಲಾಗಿದೆ.
ಆಸಕ್ತರು ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಪಿಎಲ್ ಕಾರ್ಡ್ ಪಡೆಯದವರೂ ಸಹ ಅರ್ಜಿ ಸಲ್ಲಿಸಬಹುದಾಗಿದ್ದು ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳ ಹೆಸರು ಅಥವಾ ಕುಟುಂಬದ ಇತರೆ ಸದಸ್ಯರ ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯ, ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರು ವರ್ಷ ಮೇಲ್ಪಟ್ಟವರಿಗೆ), ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ) ಗಳನ್ನು ಒದಗಿಸುವುದು ಕಡ್ಡಾಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ,ಯಾವಾಗ ಕೊನೆಯ ದಿನ ಇಲ್ಲಿದೆ ಮಾಹಿತಿ

















