ಸುಳ್ಯ : ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕಿನ ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರ್‌ ರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .
  ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯರವರು ನೆರವೇರಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಇವರು ಶಿಕ್ಷಣ ಮತ್ತು ಕೃಷಿಗೆ ಶ್ರೀ ಕ್ಷೇತ್ರದ ಪೂಜ್ಯರು ಮತ್ತು ಅಮ್ಮನವರು ಹೆಚ್ಚಿನ ಪ್ರೇರಣೆ ನೀಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಪ್ರಯೋಜನ ವನ್ನು ಸ್ವತಃ ನಾನು ಪಡೆದುಕೊಂಡಿದ್ದೇನೆ. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಸಂಘದ ಸದಸ್ಯರು ಅವರ ಮನೆಯವರಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಜನರು ಪ್ರಯೋಜನವನ್ನು ಪಡಕೊಂಡಿರುತ್ತಾರೆ. ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣಕ್ಕೆ ನೆರವಾಗುವಲ್ಲಿ ವಿದ್ಯಾಬ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನವನ್ನು ಗ್ರಾಮಾಭಿವೃಧ್ಧಿ ಯೋಜನೆಯ ಮೂಲಕ ನೀಡುತ್ತಿರುವುದು ಶ್ಲಾಘನೀಯ. ವರಮಹಾಲಕ್ಷ್ಮೀ ಪೂಜೆಯ ಹಿಂದಿನ ದಿನವಾದ ಇಂದು ವಿದ್ಯಾರ್ಥಿಗಳಿಗೆ ಲಕ್ಷ್ಮೀ ಒಲಿದಿದ್ದಾಳೆ. ಸರಕಾರಿ ಶಾಲೆಗಳಿಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಕರನ್ನು ಒದಗಿಸಿಕೊಟ್ಟು ಸರಕಾರಕ್ಕೆ ಸಹಕಾರ ನೀಡುತ್ತಿರುವುದು ಅಭಿನಂದನೀಯ.

ಈ ಭಾಗದ ಕೃಷಿಕರು ಅಡಿಕೆ ಬೆಳೆಗೆ ಬಾಧಿಸಿರುವ ರೋಗದಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ. ಯೋಜನೆಯು ಕೃಷಿಕರ ಸಮಸ್ಯೆ ಪರಿಹರಿಸುವ ಕಾರ್ಯಕ್ಕೂ ಮುಂದಾಗಲಿ. ಕೃಷಿಕರ ಸಮಸ್ಯೆ ಪರವಾಗಿ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಯೋಜನೆಯ ಸುಜ್ಞಾನ ನಿಧಿ ಶಿಷ್ಯ ವೇತನದ ಮಂಜೂರಾತಿ ಪತ್ರವನ್ನು ಅವರು ವಿತರಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ರವರು ಮಾತನಾಡಿ ಸುಳ್ಯ ತಾಲೂಕಿನ ವಾರ್ಷಿಕ SSLC ಮತ್ತು PUC ಫಲಿತಾಂಶ ದ ಬಗ್ಗೆ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಆಗಿದೆ. ಪೋಷಕರು ಮಕ್ಕಳನ್ನು ಸರಕಾರಿ ಶಾಲೆಯಲ್ಲಿ ಕಲಿಯಲು ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಗ್ರಾಮಾಭಿವೃಧ್ಧಿ ಯೋಜನೆಯ ಮೂಲಕ ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು, ಪ್ರಸ್ತುತ ವರ್ಷ ತಾಲೂಕಿನ 10 ಶಾಲೆಗಳಿಗೆ ಶಿಕ್ಷಕರನ್ನು ಒದಗಿಸಿ ಸಹಕಾರ ನೀಡಿ ಜ್ಞಾನದ ದೀಪ ಹಚ್ಚುವ ಕಾರ್ಯ ಯೋಜನೆಯಿಂದಾಗಿದೆ ಎಂದು ಹೇಳುವುದರೊಂದಿಗೆ ಅಭಿನಂದಿಸಿ ಮಂಜೂರಾತಿ ಪತ್ರ ವಿತರಿಸಿದರು.

      ಈ ಸಂದರ್ಭದಲ್ಲಿ ಸಂಪಾಜೆ ವಲಯದ ಅರಂತೋಡು ಗ್ರಾಮದ ತೊಡಿಕಾನ ನಿವಾಸಿಯಾಗಿರುವ ಬೆಳ್ಯಪ್ಪ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವೀಲ್‌ ಚೇರ್‌ನ್ನು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸುಳ್ಯ ತಾಲೂಕಿನ ಪದಾಧಿಕಾರಿಗಳ ಸಭೆಯಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ವಿಶ್ವನಾಥ ರೈ ಕಳಂಜರವರು ವಿತರಿಸಿದರು. ಅಜ್ಜಾವರ ವಲಯದ ಮಂಡೆಕೋಲು ಕಾರ್ಯಕ್ಷೇತ್ರದ ವೀರಕೇಸರಿ ಸಂಘದ ಸದಸ್ಯರಾದ ಶ್ರೀಕಾಂತ್‌ ಇವರ ತಾಯಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ಕಾರ್ಯಕ್ರಮದಡಿಯಲ್ಲಿ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಮಂಜೂರಾದ ಮೊತ್ತ ರೂ. 1 ಲಕ್ಷದ ಚೆಕ್‌ ನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ  ಶ್ರೀ ಲೋಕನಾಥ ಅಮೆಚೂರ್‌ ರವರು ವಿತರಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶ್ರೀ ಸುರೇಶ್‌ ಕಣೆಮರಡ್ಕ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷರು ಸುಳ್ಯ ತಾಲೂಕು, ತಾಲೂಕು ಭಜನಾ ಪರಿಷತ್‌ ಅಧ್ಯಕ್ಷರಾದ ಶ್ರೀ ಸೋಮಶೇಖರ ಪೈಕ, ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ವಿಮಲಾ ರಂಗಯ್ಯ, ಪಿ. ಸಿ. ಜಯರಾಮ, ಭವಾನಿಶಂಕರ ಅಡ್ತಲೆ, ತಾಲೂಕು ಜನ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ಸದಸ್ಯರು, ವಲಯದ ಮೇಲ್ವಿಚಾರಕರು, ಶೌರ್ಯ ವಿಪತ್ತು ಘಟಕದ ಘಟಕ ಪ್ರತಿನಿಧಿಗಳು, ನವಜೀವನ ಸಮಿತಿ ಪೋಷಕರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಮಾಧವ ಗೌಡ ರವರು ಯೋಜನೆಯ ವತಿಯಿಂದ ವಾರ್ಷಿಕವಾಗಿ ಹಮ್ಮಿಕೊಳ್ಳುವ ಜನಪರ ಕಾರ್ಯಕ್ರಮದ ಕುರಿತು, ಗ್ರಾಮಾಭಿವೃಧ್ಧಿ ಯೋಜನೆಯಿಂದ ತಾಲೂಕಿಗೆ ಬಂದಿರುವ ಅನುದಾನಗಳ ಬಗ್ಗೆ ಅಂಕಿ ಅಂಶಗಳೊಂದಿಗೆ ಪ್ರಾಸ್ತಾವಿಕ ಮಾತಿನೊಂದಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆಯು ನಡೆಯಿತು.  ವಲಯವಾರು ಮೇಲ್ವಿಚಾರಕರು ವೇದಿಕೆಯ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದ ವರದಿ ವಾಚಿಸಿದರು. ಜನಜಾಗೃತಿ ಕಾರ್ಯಕ್ರಮದ ಕ್ರಿಯಾಯೋಜನೆಯ ಬಗ್ಗೆ ಹಾಗೂ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಕುರಿತು ವಿಚಾರ ವಿಮರ್ಶೆ ಮಾಡಲಾಯಿತು.

ಗೋಪಾಲ ಆಚಾರ್ಯ ಪ್ರಾರ್ಥನೆ ನೆರವೇರಿಸಿದರು. ಶ್ರೀ ಮಾಧವ ಗೌಡ ಯೋಜನಾಧಿಕಾರಿಗಳು ವೇದಿಕಯಲ್ಲಿರುವ ಗಣ್ಯರನ್ನು ಸ್ವಾಗತಿಸಿ , ನಿಂತಿಕಲ್ಲು ವಲಯದ ಮೇಲ್ವಿಚಾರಕರಾದ ಶ್ರೀಮತಿ ಸವಿತಾ ಶೆಟ್ಟಿ ರವರು ಧನ್ಯವಾದ ಸಮರ್ಪಿಸಿದರು. ಗುತ್ತಿಗಾರು ವಲಯದ ಮೇಲ್ವಿಚಾರಕರಾ ಶ್ರೀ ರಾಜೇಶ್‌ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top