ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್‌ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಜ್ಜಾವರ ವಲಯದ ಮಂಡೆಕೋಲು ಕಾರ್ಯಕ್ಷೇತ್ರದ ವೀರಕೇಸರಿ ಸಂಘದ ಸದಸ್ಯರಾದ ಶ್ರೀಕಾಂತ್‌ ಇವರ ತಾಯಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ಕಾರ್ಯಕ್ರಮದಡಿಯಲ್ಲಿ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯಿಂದ ಮಂಜೂರಾದ ಮೊತ್ತ ರೂ. 1 ಲಕ್ಷದ ಚೆಕ್‌ ನ್ನು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಲೋಕನಾಥ ಅಮೆಚೂರ್‌ ರವರು ವಿತರಸಿದರು. ಈ ಸಂದರ್ಭದಲ್ಲಿ ಶ್ರೀ ಸುರೇಶ್‌ ಕಣೆಮರಡ್ಕ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಸುಳ್ಯ ತಾಲೂಕು, ತಾಲೂಕು ಭಜನಾ ಪರಿಷತ್‌ ಅಧ್ಯಕ್ಷರಾದ ಶ್ರೀ ಸೋಮಶೇಖರ ಪೈಕ, ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ವಿಮಲಾ ರಂಗಯ್ಯ, ತಾಲೂಕು ಜನ ಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ಸದಸ್ಯರು, ವಲಯದ ಮೇಲ್ವಿಚಾರಕರು, ಶೌರ್ಯ ವಿಪತ್ತು ಘಟಕದ ಘಟಕ ಪ್ರತಿನಿಧಿಗಳು, ನವಜೀವನ ಸಮಿತಿ ಪೋಷಕರು ಉಪಸ್ಥಿತರಿದ್ದರು.



































































































Leave a Comment

Your email address will not be published. Required fields are marked *

error: Content is protected !!
Scroll to Top