ಅರೆಭಾಷೆಗೆ ರಾಜ್ಯಮಟ್ಟದ ಮನ್ನಣೆ : ಸದಾನಂದ ಮಾವಜಿ

ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ ಅರೆಭಾಷಿಕರ ಸಾಹಿತ್ಯ ಸಂಸ್ಕೃತಿಗಳ ನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು ಇದು ರಾಜ್ಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು,ಅರೆಭಾಷೆಗೆ ಇಂದು ರಾಜ್ಯಮಟ್ಟದಲ್ಲಿ ಮನ್ನಣೆ ದೊರೆತ್ತಿದೆ‌ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.
ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಆ.10ರಂದು ನಡೆದ ಅರೆಭಾಷೆ ಜಂಬರ ಆಟಿ ಕೂಟದ ಸಮರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಕ್ಕೆಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಸಾಧಾಕರನ್ನು ಸನ್ಮಾನಿಸಿ ಮಾತನಾಡಿ ನಮ್ಮ ಸಂಸ್ಕ್ರತಿ ಆಚಣೆಗಳನ್ನು‌ ಬಿಂಬಿಸುವ ಕಾರ್ಯಮಗಳನ್ನು‌ ಹಮ್ಮಿಕೊಂಡಿರುವುದು ಹೆಚ್ಚು ಅರ್ಥಪೂರ್ಣವಾಗಿದೆ.ಇನ್ನಷ್ಟು ಕಾರ್ಯಕ್ರಮಗಳು ಅಕಾಡೆಮಿ ಕಡೆಯಿಂದ ನಡೆಯಲಿ ಎಂದು ಹೇಳಿದರು‌. ಸುಳ್ಯ ಎಂಜಿಎಂ ವಿದ್ಯಾ ಸಂಸ್ಥೆಗಳ ಸಂಚಾಲಕ ದೊಡ್ಡಣ್ಣ ಬರೆಮೇಲು ಆಟಿ ಬಗ್ಗೆ ಮಾತನಾಡಿ ನಮ್ಮ ಆಚಾರ ವಿಚಾರಗಳನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಅಗತ್ಯ ಇದೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ಸುಳ್ಯ ನಗರ ಪಂಚಾಯತ್ ಸದಸ್ಯ ವೆಂಕಪ್ಪ ಗೌಡ,ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ನಿವೃತ್ತ ಯೋಧ ಅಡ್ಡಂತ್ತಡ್ಕ ದೇರಣ್ಣ ಗೌಡ, ಅರೆಭಾಷೆ ಅಕಾಡೆಮಿ ಸದಸ್ಯರಾದ ಲತಾ ಪ್ರಸಾದ್ ಕುದ್ಪಾಜೆ, ಚಂದ್ರಾವತಿ ಬಡ್ಡಡ್ಕ, ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯೆ ತಿರುಮಲೇಶ್ವರಿ ಅರ್ಭಡ್ಕ, ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಉಪಸ್ಥಿತರು. ಅರೆಭಾಷೆ ಅಕಾಡೆಮಿ‌ ಸದಸ್ಯ ಚಂದ್ರಶೇಖರ ಪೇರಾಲು ವಂದಿಸಿದರು.ಲತಾಶ್ರೀ ಸುಪ್ರಿತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top