ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇತರ ಭಾಗಗಳಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.
ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ಮತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗಳು ದೊರಕಿಸಿಕೊಡುವತ್ತ ಹೆಚ್ಚಿನ ಗಮನ ಹರಿಸುವಂತೆ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರವೇ ಹೊಸ ನಿಯಮ

















