ತೊಡಿಕಾನ ಶ್ರೀ ಮಲ್ಲಿಕಾರ್ಜುನ ಭಜನಾ ಸಂಘದ ವತಿಯಿಂದ ಶ್ರೀ ಕ್ರಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳು ಜರುಗಿದವು.
ಸ್ಪರ್ಧಾ ಕಾರ್ಯಕ್ರಮವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಉದ್ಘಾಟಿಸಿದರು.
ಭಜನಾ ಸಂಘದ ಅಧ್ಯಕ್ಷ ಚಂದ್ರಶೇಖರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಮೇಲ್ವಿಚಾರಕ ಹರೀಶ್,ಭಜನಾ ಸಂಘದ ಕಾರ್ಯದರ್ಶಿ ಭವಿತ್ ಭಾಳಕಜೆ ಇತರ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು.
ತೊಡಿಕಾನ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ

















