ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆ ನಡೆಯುತ್ತಿದ್ದಾಗ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಸನ್ನೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತರು.
ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಿನ್ನೆ ಜೈ ವೀರಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ 11.50 ರ ವೇಳೆಗೆ ತೊಕ್ಕೊಟ್ಟು ಒಳಪೇಟೆಯ ತಾಜ್ ಸೈಕಲ್ ಶಾಪ್ ಬಳಿ ತಲುಪಿದಾಗ ಯುವಕರ ಗುಂಪೊಂದು ಬ್ಯಾಂಡ್ ಬಾರಿಸುತ್ತಾ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ತೊಂದರೆ ನೀಡಿದ್ದಾರೆ. ಈ ವೇಳೆ ಸ್ಥಳದಲ್ಲೇ ಇದ್ದ ಮಹಿಳಾ ಪೊಲೀಸರು ಯುವಕರಲ್ಲಿ ಮುಂದಕ್ಕೆ ಹೋಗುವಂತೆ ತಿಳಿಸಿದ್ದಾರೆ. ಈ ವೇಳೆ ಆರೋಪಿಗಳಲ್ಲಿ ಒಬ್ಬ ತನ್ನ ಕೈಬೆರಳುಗಳಲ್ಲಿ ಅಶ್ಲೀಲ ಸನ್ನೆ ಮಾಡಿ ನಿಂದಿಸಿದ್ದು, ಮತ್ತೊಬ್ಬ ಆರೋಪಿ ಮಹಿಳಾ ಪೊಲೀಸ್ ಸಿಬ್ಬಂದಿಯ ಮೈಮುಟ್ಟಿ ತಳ್ಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಘಟನೆ ವೇಳೆ ಪೊಲೀಸರು ಮತ್ತು ಶೋಭಾಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ನಡುವೆ ತಳ್ಳಾಟ ನಡೆದಿದೆ. ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ಆರೋಪಿಗಳಾದ ದೀಪಕ್ ಮತ್ತು ಕಿರಣ್ ಅವರನ್ನ ಬಂಧಿಸಿದ್ದು ដថ 2 2 2 2023(U/s-126(2), 132, 74, 3(5) ಕಲಂ ಅಡಿ ಪ್ರಕರಣ ದಾಖಲಿಸಿದ್ದಾರೆ.
ಮಹಿಳಾ ಪೊಲೀಸ್ ಸಿಬ್ಬಂದಿಗೆ ಅಶ್ಲೀಲ ಸನ್ನೆ ಮಾಡಿದ ಯುವಕ ಮೇಲೆ ಪ್ರಕರಣ ದಾಖಲು

















