ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ತಾಲೂಕು ಪಂಚಾ ಯತ್, ಜಿಲ್ಲಾ ಪಂಚಾಯತ್ ಚುನಾವಣೆ ಇನ್ನು 3 ತಿಂಗಳಲ್ಲಿ ನಡೆಯುವ ನಿರೀಕ್ಷೆ ಮೂಡಿದೆ. 3 ತಿಂಗಳಲ್ಲಿ ಚುನಾವಣೆ ನಡೆಸುವುದಾಗಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ತಾಲೂಕು ಪಂಚಾಯತ್ನ ಕ್ಷೇತ್ರ ವಿಂಗಡಣೆ ಕಾರ್ಯ ಈಗಾಗಲೇ ಮುಗಿದಿದೆ. ಕ್ಷೇತ್ರ ಮೀಸಲಾತಿ ನಿಗದಿ ಮಾಡುವ ಪ್ರಕ್ರಿಯ ಮಾತ್ರ ಬಾಕಿ ಇದೆ. ಅದನ್ನು ಶೀಘ್ರವೇ ಮಾಡುವುದಾಗಿ ಸಚಿವರು ಹೇಳಿದ್ದಾರೆ.
ಜತೆಗೆ ಗ್ರಾಮ ಪಂಚಾಯತ್ಗಳ ಅವಧಿ ಡಿಸೆಂಬರ್, ಜನವರಿಯಲ್ಲಿ ಮುಗಿಯಲಿದ್ದು, ಇನ್ನು ಮುಂದಕ್ಕೆ ಪಕ್ಷದ ಚಿಹ್ನೆಯ ಮೂಲಕ ಗ್ರಾ.ಪಂ. ಚುನಾವಣೆ ನಡೆಸುವ ಚಿಂತನೆಯು ಇದೆ ಎಂದು ಸಚಿವರು ಹೇಳಿದ್ದಾರೆ.
ಜಿ.ಪಂ., ತಾ.ಪಂ.ಗೆ ಇನ್ನೂ ಮೂರು ತಿಂಗಳಲ್ಲಿ ಚುನಾವಣೆ ?

















