ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸುಳ್ಯದಲ್ಲಿ ಹಿಂದೂ ಬಾಂಧವರನ್ನು ಸಂಘಟಿಸುವ ಸಲುವಾಗಿ ಶ್ರೀ ಕೃಷ್ಣ ಪರಮಾತ್ಮನ ಜನ್ಮ ದಿನಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆಯೊಂದಿಗೆ 12 ನೇ ವರ್ಷದ ಮೊಸರು ಕುಡಿಕೆ ಉತ್ಸವವನ್ನು ಅರ್ಥಪೂರ್ಣವಾದ ಶೋಭಾಯಾತ್ರೆ ಆಚರಣೆ ಇಂದು ಮಧ್ಯಾಹ್ನನತಂತರ ನಡೆಯಲಿದೆ.
ಆ. 19 ರಂದು ಮದ್ಯಾಹ್ನದ ನಂತರ ನಡೆಯಲಿರುವ ಉತ್ಸವದಉದ್ಘಾಟನೆಯನ್ನು ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ನೆರವೇರಿಸಲಿದ್ದಾರೆ. ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಖ್ಯಾತ ವಾಗ್ನಿಗಳಾದ ಚಕ್ರವರ್ತಿ ಸೂಲಿಬೆಲೆ ಯವರು ಪ್ರಧಾನ ಭಾಷಣ ಮಾಡಲಿದ್ದಾರೆ. ಸಂಘ ಚಾಲಕರಾದ ಚಂದ್ರಶೇಖರ ತಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಬಾರಿ ವಿಶೇಷವಾಗಿ ಬೆಳಗ್ಗೆ ಎಣ್ಣೆ ಕಂಬ ಏರುವ ಸ್ಪರ್ಧೆ ನಡೆಯಲಿದೆ. ಮಕ್ಕಳಿಗಾಗಿ ಶ್ರೀಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಇಂದು(ಆ.19) ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ

















