ಸುಳ್ಯ : ಮೊಸರು ಕುಡಿಕೆ ಉತ್ಸವಕ್ಕೆ ಅದ್ದೂರಿ ಚಾಲನೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ, ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ೧೨ನೇ ವರ್ಷದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ಚೆನ್ನಕೇಶವ ದೇವಳದ ವಠಾರದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಅದ್ದೂರಿ ಚಾಲನೆ ನೀಡಿ ಶುಭಹಾರೈಸಿದರು. ಹಿಂದೂ ಯುವಕರ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಗೆ ಅಟಲ್ ಬಿಹಾರಿ ವಾಜಪೇಯಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಹರೀಶ್‌ ಕಂಜಿಪಿಲಿ ಮಡಿಕೆ ಒಡೆಯುವ ಮೂಲಕ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಬಾಲಚಂದ್ರ ಅಡ್ಕಾ‌ರ್ ಭಗವಧ್ವಜವನ್ನು ಹಾರಿಸುವ ಮೂಲಕ ಚಾಲನೆ ನೀಡಿದರು.
ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಶ್ರೀಕಾಂತ್ ಗೋಳ್ವಾಲ್ಕರ್, ಆಲೆಟ್ಟಿ ಸೊಸೈಟಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋದ್ ಶೆಟ್ಟಿ ಮೇನಾಲ, ಕಲ್ಕುಡ ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ನಾವೂರು, ವಿಹೆಚ್‌ಪಿ ಮಾಜಿ ಅಧ್ಯಕ್ಷ ಸೋಮಶೇಖರ ಪೈಕ, ಮೊಸರು ಕುಡಿಕೆ ಉತ್ಸವ ಸಮಿತಿ ಮಾಜಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಕೋಶಾಧಿಕಾರಿ ನವೀನ್ ಎಲಿಮಲೆ, ಉಪಾಧ್ಯಕ್ಷ ಹರಿಪ್ರಸಾದ್ ಸುಲಾಯ, ಕ ಮಾತೃಶಕ್ತಿ ಸಂಯೋಜಕಿ ರೀನಾ ಚಂದ್ರಶೇಖ‌ರ್, ದುರ್ಗಾವಾಹಿನಿ ಸಂಯೋಜಕಿ ವಿಶಾಲ ಸೀತಾರಾಮ, ವ್ಯವಸ್ಥಾ ಪ್ರಮುಖ್ ವರ್ಷಿತ್ ಚೊಕ್ಕಾಡಿ, ದೇವಿಪ್ರಸಾದ್ ಅತ್ಯಾಡಿ, ಹರಿಪ್ರಸಾದ್ ಎಲಿಮಲೆ, ರವಿಚಂದ್ರ ಕೊಡಿಯಾಲಬೈಲು, ಭಾನುಪ್ರಕಾಶ್, ಸತೀಶ್ ಕಲ್ಮಕಾರು, ಸುನಿಲ್ ಕೇರ್ಪಳ, ಮನೋಜ್ ಪೆರಾಜೆ, ಉಪೇಂದ್ರ ನಾಯಕ್ ಪಾರ್ವತಿ ಕುಂಚಡ್ಕ ಹಾಗೂ ಸಂಘಟನೆಯ ಪದಾಧಿಕಾರಿಗಳು ಸದಸ್ಯರು ನೂರಾರು ಹಿಂದು ಭಾಂದವರು ಉಪಸ್ಥಿತರಿದ್ದರು.ಆಕರ್ಷ ಕುಣಿತ ಭಜನೆ ಶೋಭಾಯಾತ್ರೆಯ ಮೆರುಗನ್ನು ಹೆಚ್ಚಿಸುತ್ತಿವೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top