ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ‌.
ಬ್ರಹ್ಮಾವರ ತಾಲೂಕು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಮುಂದಿನ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿದೆ.
ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸರು ಎರಡು ಬಾರಿ ನೋಟಿಸ್‌ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ ತಾಲೂಕು ಉಜಿರೆಯ ಮಹೇಶ್ ಶೆಟ್ಟಿ ನಿವಾಸಕ್ಕೆ ಆಗಮಿಸಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬ್ರಹ್ಮಾವರಕ್ಕೆ ಕರೆದೊಯ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top