ಸುಳ್ಯ : ಚನ್ನಕೇಶವ ದೇವಳದಲ್ಲಿ ಶ್ರದ್ಧಾ ಭಕ್ತಿಯಿಂದ ಗಣೇಶೋತ್ಸವ ಆರಂಭ

ಸುಳ್ಯ ಸಾರ್ವಜನಿಕ ದೇವತಾರಧಾನ ಸಮಿತಿ, ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿಯ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆ. 27 ರಿಂದ 31ರ ತನಕ ಸಮಾಜ ಸಂಘಟನೆ ಮತ್ತು ಧರ್ಮ ಜಾಗೃತಿಗಾಗಿ ನಡೆಯಲಿರುವ 57 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭವು ಆ. 27 ರಂದು ನಡೆಯಿತು.
ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯೂಕೇಷನ್ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ರವರು ದೀಪ ಪ್ರಜ್ವಲಿಸಿ ಶುಭ ಹಾರೈಸಿದರು. ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಪಿ. ಕೆ. ಉಮೇಶ ರವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊತ್ತೇಸರ ಡಾ. ಹರಪ್ರಸಾದ್ ತುದಿಯಡ್ಕ, ಸಾರ್ವಜನಿಕ ದೇವತಾರಾಧನ ಸಮಿತಿ ಅಧ್ಯಕ್ಷ ದಿನೇಶ್‌ ಕುಮಾರ್ ಕೆ ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top