ಸುಳ್ಯ ದಸರಾ ಅಚ್ಚುಕಟ್ಟಾಗಿ ನಡೆಸಲು ಸಮಿತಿಗಳ ಪೂರ್ವಭಾವಿ ಸಭೆ

ಸುಳ್ಯ ದಸರಾಕ್ಕೆ ಪೂರ್ವ ತಯಾರಿಗೆ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಶಾರದಾಂಬಾ ಸಮೂಹ ಸಮಿತಿಗಳ ಪದಾಕಾರಿಗಳ ಹಾಗೂ ಸಮಿತಿಯ ಸರ್ವ ಸದಸ್ಯರ ಸಭೆಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ಇತ್ತೀಚೆಗೆ ನಡೆಯಿತು.
ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷರಾದ ಡಾ. ಲೀಲಾಧ‌ರ್ ಡಿ.ವಿ. ಮಾತನಾಡಿ, 54ನೇ ವರ್ಷದ ಸುಳ್ಯ ದಸರಾ 2025 ಸೆ.29ರಂದು ಪ್ರಾರಂಭಗೊಂಡು ಅ.7ರ ವರೆಗೆ 9ದಿನಗಳ ಕಾಲ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾಠ್ಯಕ್ರಮ ದೊಂದಿಗೆ ನಡೆಯಲಿದ್ದು ಶೋಭಾಯಾತ್ರೆಯನ್ನುಶಾಂತಿಯುತವಾಗಿ ಎಲ್ಲಾಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ಯಶಸ್ವಿ ಯಾಗಿ ನಡೆಸುವಂತೆ ವಿನಂತಿಸಿದರು. ಶಾರದಾಂಬಾ ಸೇವಾಸಮಿತಿ ಗೌರವಾಧ್ಯಕ್ಷ ಗೋಕುಲ್ ಶಾರದಾಂಬ ಸಮಿತಿ ಅಧ್ಯಕ್ಷ ನಾರಾಯಣ ಕೇಕ ಶಾರದಾಂಬ ಮಹಿಳಾ ಸಮಿತಿಯ ಅಧ್ಯಕ್ಷೆ ಲತಾ ಮಧುಸೂಧನ್ ಕಾಠ್ಯಕ್ರಮಗಳ ಪೂರ್ವ ತಯಾರಿ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾರದಾಂಬ ಸಮಿತಿಯ ಉಪಾಧ್ಯಕ್ಷೆ ಯಶೋದಾ ರಾಮಚಂದ್ರ, ಕೋಶಾಧಿಕಾರಿ ಅಶೋಕ್ ಪ್ರಭು,
ಉತ್ಸವ ಸಮಿತಿ ಕೋಶಾಧಿಕಾರಿ ಬೆಳ್ಯಪ್ಪ ಗೌಡ, ದಸರಾಸೇವಾಟ್ರಸ್ಟ್‌ ಕಾರ್ಯದರ್ಶಿ ಎಂ.ಕೆ. ಸತೀಶ್, ಉಪಸ್ಥಿತರಿದ್ದರು ಶಾರದಾಂಬ ಸಮೂಹ ಸಮಿತಿಗಳ ಎಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯರು ಭಾಗವಹಿಸಿದ್ದರು. ಶಾರದಾಂಬ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್ ಸ್ವಾಗತಿಸಿ, ಸುಳ್ಯ ತಾದಸರಾ ಉತ್ಸವ ಸಮಿತಿ ಕೋಶಾಧಿಕಾರಿ ಸುನಿಲ್ ಕುಮಾರ್ ಕೇರ್ಪಳ ವಂದಿಸಿ, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣರೈ ನಿರೂಪಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top