ಗಣಪತಿ ಶೋಭಾಯಾತ್ರೆ ವೇಳೆ ಟ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು

ಗಣಪತಿ ಶೋಭಾಯಾತ್ರೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹುಣುಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆಯಲ್ಲಿ ರವಿವಾರ ರಾತ್ರಿ ನಡೆದಿದೆ.
ಆಟೋ ರಾಜು(34) ಸಾವನ್ನಪ್ಪಿದ ವಕ್ತಿ ಎಂದು ಗುರುತಿಸಲಾಗಿದೆ, ಪತ್ನಿ, ಎರಡು ಹೆಣ್ಣು, ಗಂಡು ಮಗು ಸೇರಿದಂತೆ ಮೂವರು ಮಕ್ಕಳನ್ನು ಅವರು ಅಗಲಿದ್ದಾರೆ. ಎರಡು ಕಡೆ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಮೆರವಣಿಗೆ ಮೂಲಕ ಟ್ರ್ಯಾಕ್ಟರ್ ಗಳಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ಆಟೋರಾಜು ಒಮ್ಮೆಲೆ ಕುಸಿದು ಕೆಳಕ್ಕೆ ಬಿದ್ದಿದ್ದಾರೆ. ಚಿಕಿತ್ಸೆಗಾಗಿ ತತ್ ಕ್ಷಣವೇ ಹುಣಸೂರು ಆಸ್ಪತ್ರೆಗೆ ಕರೆ ತರುವಾಗಲೇ ಮಾರ್ಗ ಮಧ್ಯದಲ್ಲೇ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಘಟನೆಯಿಂದ ವಿಸರ್ಜನೆಯ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಸೂತಕ ಛಾಯೆ ಆವರಿಸಿತು. ವಿಷಯ ತಿಳಿಯುತ್ತಿದ್ದಂತೆ ಮೆರವಣಿಗೆ ರದ್ದು ಮಾಡಿ ನೇರವಾಗಿ ಚಿಕ್ಕ ಕೆರೆಯಲ್ಲಿ ಗಣಪತಿಗಳನ್ನು ವಿಸರ್ಜಿಸಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದಷ್ಟೆ ಇವರ ತಂದೆ ಸಾವನ್ನಪ್ಪಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top