ಕಡೆಪಾಲ : ಲಾರಿ ಕಾರು ಅಪಘಾತದಲ್ಲಿ ಮಹಿಳೆ ಸಾವು,ಗಂಭೀರ ಗಾಯಗೊಂಡರು ಮಂಗಳೂರಿಗೆ ಶಿಪ್ಟ್

ಸುಳ್ಯ: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಸಮೀಪ ಕಡೆಪಾಲದಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.
ಸುಳ್ಯದ ಕಡೆ ಬರುತ್ತಿದ್ದ ಟ್ಯಾಂಕ‌ರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ.ಅಪಘಾತಕ್ಕೀಡಾದ ಕಾರಿನವರು ಕೊಡಗು ಸಿದ್ದಾಪುರದ ನೆಲ್ಲಿಹುದಿಕೇರಿಯವರು.ಕಾರಿನಲ್ಲಿದ್ದ ನೆಲ್ಲಿಹುದಿಕೇರಿಯ ಶೋಭಾ (47) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಕಾರು ಚಾಲಕ ದೇವಯ್ಯ ಹಾಗೂ ವನಜಾಕ್ಷಿ ಗಂಭೀರ ಗಾಯಗೊಂಡಿದ್ದು ಸುಳ್ಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿನ‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top