ಧರ್ಮಸ್ಥಳ ಪ್ರಕರಣದ ಕುರಿತಾಗಿ ಅಮಿತ್ ಷಾ ಭೇಟಿ ಮಾಡಿದ ರಾಜ್ಯ ಬಿಜೆಪಿ‌ ನಿಯೋಗ

ಧರ್ಮಸ್ಥಳ ಪ್ರಕರಣದ ಕುರಿತಾಗಿ ರಾಜ್ಯ ಬಿಜೆಪಿ ನಿಯೋಗ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವಪ್ರಲ್ಲಾದ್ ಜೋಶಿ, ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜ, ಎಸ್.ಆರ್. ವಿಶ್ವನಾಥ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ನಿಯೋಗದಲ್ಲಿ ಭಾಗವಹಿಸಿದ್ದರು.
ಅಮಿತ್ ಷಾ ಭೇಟಿ ಬಳಿಕ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಧರ್ಮಸ್ಥಳ ವಿಚಾರವಾಗಿ ಯಾವ ರೀತಿ ಷಡ್ಯಂತ್ರ ನಡೆಯುತ್ತಿದೆ ಮತ್ತು ಈ ಷಡ್ಯಂತ್ರದ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂಬ ವಿಚಾರವನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.



































































































Leave a Comment

Your email address will not be published. Required fields are marked *

error: Content is protected !!
Scroll to Top