ವಿದ್ಯಾರ್ಥಿನಿಗೆ ಬೈಕಲ್ಲಿ ಬಂದು ಮೈಗೆ ಕೈ ಹಾಕಿದ ಆರೋಪಿಗೆ ನ್ಯಾಯಾಂಗ ಬಂಧನ

ಪುನ್ಚತಾರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನೋರ್ವನಿಗೆ ಮಂಗಳವಾರ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ ಘಟನೆ ವರದಿಯಾಗಿದೆ.
ಕಾಲೇಜು ವಿದ್ಯಾರ್ಥಿನಿ ಸಂಜೆ ರಸ್ತೆ ಬದಿ ನಡೆದುಕೊಂಡು ಮನೆಗೆ ಹೋಗುವಾಗ ಪೆರ್ಲಂಪಾಡಿಯ ಉದಯ ಎಂಬವನು ಬೈಕಿನಲ್ಲಿ ಬಂದು ವಿದ್ಯಾರ್ಥಿನಿಯ ಮೈಗೆ ಕೈ ಹಾಕಿರುವುದಾಗಿ ವಿದ್ಯಾರ್ಥಿನಿ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.
ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಸಿ.ಸಿ. ಕ್ಯಾಮರಾ ತಪಾಸಣೆ ನಡೆಸಿ ಕೃತ್ಯ ನಡೆಸಿರುವ ಪೆರ್ಲಂಪಾಡಿಯ ಉದಯ ಎಂಬ ಆರೋಪಿಯನ್ನು‌ ಇಂದು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆರೋಪಿಗೆ ಸೆ.12 ರವರೆಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top