ಮುಂದಿನ ಮಳೆಗಾಲಕ್ಕೆ ಮೊದಲು ಸುಳ್ಯಕ್ಕೆ ಅತೀ ಅಗತ್ಯವಾಗಿರುವ 110 ಕೆ.ವಿ ವಿದ್ಯುತ್ ಲೈನ್ ಹಾಗೂ ಸಬ್ ಸ್ಟೇಷನ್ ಚಾಲೂ ಆಗಲು ಪ್ರಯತ್ನ : ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಭರವಸೆ

ಸುಳ್ಯಕ್ಕೆ ಅತೀ ಅಗತ್ಯವಾಗಿರುವ ೧೧೦ಕೆವಿ ಸಬ್‌ಸ್ಟೇಷನ್ ಹಾಗೂ ಲೈನ್ ಕಾಮಗಾರಿ ಶೀಘ್ರ ಮುಗಿಸಿ ಮುಂದಿನ ಮಳೆಗಾಲಕ್ಕೆ ಮುನ್ನ ಲೈನ್ ಚಾಲೂ ಆಗಲು ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಹೇಳಿದರು.ಅವರು ಸೆ. 11ರಂದು ಸರಕಾರಿ ಕಚೇರಿಗಳಿಗೆ ಭೇಟಿ
ನೀಡಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಲು ಅಧಿಕಾರಿಗಳಿಗೆ ತಿಳಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.
ಸುಳ್ಯಕ್ಕೆ ಲೈನ್ ಹಾದು ಹೋಗುವ ಮಾರ್ಗದಲ್ಲಿ ಟವರ್ ನಿರ್ಮಾಣದ ಸ್ಥಳದ ಸರ್ವೆ ನಡೆಸಿ, ನಕ್ಷೆ ತಯಾರಿಸಿ ಪರಿಹಾರ ನೀಡಿ ಟವರ್ ನಿರ್ಮಾಣ ಕಾಮಗಾರಿ ವೇಗ ನೀಡುವಂತೆ ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ಸುಳ್ಯಕ್ಕೆ ಇಂಧನ ಸಚಿವರನ್ನು ಕರೆಸಿ ಸಭೆ ನಡೆಸಿ, ಕಾಮಗಾರಿಗೆ ವೇಗ ನೀಡುವ ಪ್ರಯತ್ನ ನಡೆಸಲಾಗುವುದು ಎಂದರು. ಸುಳ್ಯದ ಸರಕಾರಿ ಕಚೇರಿಯಲ್ಲಿನ ಸಿಬ್ಬಂದಿ ಕೊರತೆ ಪರಿಹರಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ, ಕಡಬ ತಾಲೂಕು ಕೇಂದ್ರದಲ್ಲೂ ಇಲಾಖೆಗಳ ಆರಂಭಿಸಲು ಪ್ರಯತ್ನ ನಡೆಸುವ ಭರವಸೆ ನೀಡಿದರು.
ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸುಳ್ಯ ತಾಲೂಕು ಕೇಂದ್ರದ ವಿವಿಧ ಸರಕಾರಿ ಕಚೇರಿಗಳಿಗೆ ಭೇಟಿ ಮಾಡಿ, ಅಽಕಾರಿಗಳ ಜೊತೆ ಮಾತನಾಡಿ, ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡುವ ಬಗ್ಗೆ ತಿಳಿಸಿದರು.
ಸುಳ್ಯ ತಾಲೂಕು ಕಚೇರಿ, ತಾಲೂಕು ಆಸ್ಪತ್ರೆ, ಮೆಸ್ಕಾಂ ಕಚೇರಿ, ಪೊಲೀಸ್ ಠಾಣೆ, ಕೆಎಸ್‌ಆರ್‌ಟಿಸಿ ಸುಳ್ಯ ಘಟಕಕ್ಕೆ ಭೇಟಿ ನೀಡಲಾಯಿತು. ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಬಗ್ಗೆ, ತ್ವರಿತ ಸೇವೆ ನೀಡಲು ನಿರ್ದೇಶನ ನೀಡಲಾಯಿತು. ಸುಳ್ಯ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕುಂದು ಕೊರತೆಗಳನ್ನು ಪರಿಶೀಲಿಸಿ, ವೈದ್ಯರೊಂದಿಗೆ ಚರ್ಚಿಸಲಾಯಿತು. ತಾಲೂಕು ಕಚೇರಿಗೆ ಭೇಟಿ ನೀಡಿ ತಹಶೀಲ್ದಾರ್ ಮಂಜುಳಾ ಅವರೊಂದಿಗೆ ಮಾತನಾಡಿ, ಅಕ್ರಮ-ಸಕ್ರಮ ಸಮಿತಿ ಸಭೆ ಕರೆಯುವಂತೆ ಆಗ್ರಹಿಸಿ, ಕಂದಾಯ ಇಲಾಖೆಯ ಸೇವೆಗಳಲ್ಲಿ ವಿಳಂಬ ಮಾಡದಂತೆ ಸೂಚಿಸಲಾಯಿತು. ೧೧೦ ಕೆವಿ ಲೈನ್ ಎಳೆಯಲು ಸರ್ವೆ ಮಾಡಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ನೇತೃತ್ವದಲ್ಲಿ ಕಾರ್ಯಪ್ರವೃತರಾಗುವಂತೆ ಸೂಚಿಸಿದರು.
ಸುಳ್ಯ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ೧೧೦ ಕೆವಿ ಸಬ್‌ಸ್ಟೇಷನ್ ಕಾಮಗಾರಿ ವೀಕ್ಷಿಸಲಾಯಿತು. ಕೆಪಿಟಿಸಿಎಲ್ ಎಂಜೀನಿಯರ್ ಅವರನ್ನು ಸಂಪರ್ಕಿಸಿ ಮುಂದಿನ ಮಳೆಗಾಲಕ್ಕೆ ಮುನ್ನ ೧೧೦ ಕೆವಿ ಸಬ್‌ಸ್ಟೇಷನ್ ಹಾಗೂ ಲೈನ್ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಬಳಿಕ ಪೊಲೀಸ್ ಠಾಣೆಗೆ ಭೇಟಿ ನೀಡಿ, ಕೆಂಪು ಕಲ್ಲು ಮತ್ತು ಮರಳು ಸಾಗಾಟ ಸಂಬAಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಕೆಎಸ್‌ಆರ್‌ಟಿಸಿ ಡಿಪೋಗೆ ಭೇಟಿ ನೀಡಿ ಸುಳ್ಯದ ಗ್ರಾಮೀಣ ಭಾಗದ ಬಸ್ ಸಮಸ್ಯೆಗಳನ್ನು ಪರಿಹರಿಸಲು ಕ್ರಮಕ್ಕೆ ಸೂಚಿಸಲಾಯಿತು.
ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹೂಲ್ ಹಮೀದ್, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫಾ, ಪ್ರಮುಖರಾದ ಗೀತಾ ಕೋಲ್ಚಾರ್, ರಂಜಿತ್ ರೈ, ಸುಜಯಕೃಷ್ಣ, ಅನುಸೂಯ, ಮಹಮ್ಮದ್ ಇಕ್ಬಾಲ್, ಪಿ.ಎ.ಮಹಮ್ಮದ್, ಶಾಫಿ ಕುತ್ತಮೊಟ್ಟೆ, ರಾಜುಪಂಡಿತ್, ಶಹೀದ್ ಪಾರೆ, ಹೆಚ್.ಆದಂ ಕಡಬ, ಶ್ರೀಹರಿ, ರಾಧಾಕೃಷ್ಣ, ಹನೀಫ್, ಜಮಾಲುದ್ದೀನ್, ಜಂಶೀರ್, ಚಂದ್ರಶೇಖರ್,ಅರಂತೋಡು ಗ್ರಾಮ ಪಂಚಾಯತ್ ರವೀಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top