ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಟಿ. ಎಂ. ಶಹೀದ್ ನೇಮಕ

ಅರಂತೋಡಿನ ಪ್ರಭಾವಿ ನಾಯಕ ಟಿ.ಎಂ ಶಾಹಿದ್ ತೆಕ್ಕಿಲ್ ರವರು ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕಗೊಂಡಿರುತ್ತಾರೆ. ರಾಜಕೀಯದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಕ್ರಿಯಾಶೀಲ ರಾಜಕಾರಣಿ ಟಿ.ಎಂ ಶಾಹಿದ್ ತೆಕ್ಕಿಲ್ ರವರು ಸುಳ್ಯ ತಾಲೂಕು ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಹಾಗು ಹಾವೇರಿ ಜಿಲ್ಲೆಯ ಹಿರೆಕೆರೂರು, ಕೊಡಗು ಜೆಲ್ಲೆಯ ವಿರಾಜಪೇಟೆ, ದ .ಕ ಜಿಲ್ಲೆಯ ಬೆಳ್ತಂಗಡಿ, ಹಾಸನ ಜಿಲ್ಲೆಯ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕೆಪಿಸಿಸಿ ಕೊಡಗು ಜಿಲ್ಲಾ ಸದಸ್ಯ ನೋಂದಣಿಯ ಉಸ್ತುವಾರಿಯಾಗಿದ್ದರು. ಸದಸ್ಯತ್ವ ನೋಂದಣಿಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ದ ಕ ಜಿಲ್ಲೆಯಲ್ಲಿ ಗರಿಷ್ಠ ಸದಸ್ಯರನ್ನ ನೋಂದಾಯಿಸಿದ್ದು ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪ್ಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. 2001ರಲ್ಲಿ ರಾಜ್ಯ ಯುವ ಪ್ರಶಸ್ತಿ ಪಡೆದ ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ಸಂಪಾಜೆ ಗೂನಡ್ಕ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ, ಪ್ರಸ್ತುತ ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿಯ ಅಧ್ಯಕ್ಷರಾಗಿ, ಅರಂತೋಡು ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ಇದರ ಗೌರವಾಧ್ಯಕ್ಷರಾಗಿ ಹಲವಾರು ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಸಹಕಾರ, ಕೃಷಿ, ಉದ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವ ಇವರು ಪ್ರತಿಷ್ಠಿತ ತೆಕ್ಕಿಲ್ ಮನೆತನದವರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top